ರೈಲಿನಡಿಗೆ ಬಿದ್ದು ಆತ್ಮಹತ್ಯೆ
Update: 2018-02-24 21:32 IST
ಕೋಟ, ಫೆ.24: ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.24ರಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ಬೇಳೂರು ಗ್ರಾಮದ ಕೋಣಬಗೆಯ ಉಮೇಶ ಶೆಟ್ಟಿ(46) ಎಂದು ಗುರುತಿಸಲಾಗಿದೆ.
ವಿಪರೀತ ಮದ್ಯ ಸೇವನೆ ಚಟ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ರೈಲ್ವೆ ಹಳಿಯ ಮೇಲೆ ಮಲಗಿ ಮಂಗಳೂರು ಕಡೆಯಿಂದ ಕಾರವಾರ ಕಡೆಗೆ ಹೋಗುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.