×
Ad

ಶಿವಮೊಗ್ಗ: ಅಕ್ರಮ ಮರಳು ದಾಸ್ತಾನು ಅಡ್ಡೆಗೆ ದಾಳಿ; ಕೋಟ್ಯಾಂತರ ರೂ. ಮೌಲ್ಯದ ಮರಳು ವಶ

Update: 2018-02-24 22:43 IST

ಶಿವಮೊಗ್ಗ, ಫೆ. 24: ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆ ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಶನಿವಾರ ದಿಢೀರ್ ದಾಳಿ ನಡೆಸಿ, ಕೋಟ್ಯಾಂತರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ನಡೆದಿದೆ. 

ಹರಿದ್ರಾವತಿ ಹಾಗೂ ಹಳೇ ಬಾಣಿಗ ಗ್ರಾಮಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 16 ಜನರ ವಿರುದ್ದ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡವರ ಬಂಧನಕ್ಕೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹಳೇ ಬಾಣಿಗ ಹಾಗೂ ಹರಿದ್ರಾವತಿಯ ಶರಾವತಿ ಹಿನ್ನೀರ ಪ್ರದೇಶದಲಿ ಸಾವಿರಾರು ಲೋಡ್ ಮರಳು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಈ ಕಾರ್ಯಾಚರಣೆ ನಡೆಸಿದ್ದಾರೆ. ಹೊಸನಗರ ತಾಲೂಕಿನ ಇತಿಹಾಸದಲ್ಲಿಯೇ ಇದೇ ಪ್ರಪ್ರಥಮ ಬಾರಿಗೆ ಭಾರಿ ದೊಡ್ಡ ಪ್ರಮಾಣದ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಿ, ಮರಳು ಮಾಫಿಯಾಕ್ಕೆ ಭಾರೀ ಪೆಟ್ಟು ಕೊಡುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News