×
Ad

ಮಂಡ್ಯ: ವಿದ್ಯಾರ್ಥಿ ಹಕ್ಕು ಆಯೋಗಕ್ಕೆ ಒತ್ತಾಯಿಸಿ ಸಹಿ ಸಂಗ್ರಹ

Update: 2018-02-24 22:51 IST

ಮಂಡ್ಯ, ಫೆ.24: ವಿದ್ಯಾರ್ಥಿ ಹಕ್ಕುಗಳಿಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಜಿಲ್ಲಾ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ನಗರದ ಪಿಇಎಸ್ ಪದವಿ ಕಾಲೇಜಿನಲ್ಲಿ ಶನಿವಾರ ನಡೆಯಿತು. 

ವಿದ್ಯಾರ್ಥಿ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ವಲ್ಲಭ್ ಮಾತನಾಡಿ, ಮಹಿಳೆ ಮತ್ತು ಮಕ್ಕಳಿಗೆ ಹಕ್ಕುಗಳಿವೆ. ಆದರೆ, ವಿದ್ಯಾರ್ಥಿಗಳಿಗೆ ಯಾವುದೇ ಹಕ್ಕುಗಳಿರುವುದಿಲ್ಲ. ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸಿ ಸಹಿ ಸಂಗ್ರಹ ಮಾಡಲಾಗುತ್ತಿದೆ ಎಂದರು. 

ಪ್ರತಿಯೊಂದು ಜಿಲ್ಲೆಯಲ್ಲೂ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಬಸ್‍ಪಾಸ್ ಸೇರಿದಂತೆ ವಿವಿಧ ಸೌಲಭ್ಯಗಳು ದೊರೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಹಕ್ಕು ಆಯೋಗ ಅವಶ್ಯಕ ಎಂದು ಅವರು ಪ್ರತಿಪಾದಿಸಿದರು.

ನಮ್ಮ ಕೋರಿಕೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಘೋಷಿಸಿದ್ದು, ವಿದ್ಯಾರ್ಥಿ ಹಕ್ಕು ಆಯೋಗ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಸುಂಡಹಳ್ಳಿ ಮಂಜುನಾಥ್, ಸಚ್ಚಿನ್, ಹೇಮರಾಜ್, ಶ್ರವಣ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News