ಫ್ಲಾಟ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರ ಸೆರೆ

Update: 2018-02-24 17:48 GMT

ಮಂಗಳೂರು, ಫೆ.24: ನಗರದ ಕೊಡಿಯಾಲ್‌ಗುತ್ತು ಎಂಬಲ್ಲಿನ ಫ್ಲಾಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಇನ್ನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ಬಂದಿಸಿದ್ದಾರೆ.

ಬಂಧಿತನನ್ನು ಅಡ್ಯಾರ್ ಪದವಿನ ರಿಯಾಝ್ ಅಹ್ಮದ್ (35) ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಮಹಿಳೆ ಕೂಡ ಸೇರಿದ್ದಾರೆ.
ಆರೋಪಿಗಳಿಂದ 1,800 ರೂ., ಮೊಬೈಲ್ ಫೋನ್ ಹಾಗೂ ಆಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತಿನ ಒಟ್ಟು ಮೌಲ್ಯ 1,61,800 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳ ಪೈಕಿ ಮಹಿಳೆಯು ಈ ಫ್ಲಾಟ್‌ನಲ್ಲಿ ವಾಸ್ತವ್ಯವಿದ್ದು, ಯುವತಿಯರನ್ನು ಇಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿ ಹಣ ಗಳಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್ ಶಾಂತಾರಾಮ, ಎಸ್ಸೈಗಳಾದ ಶ್ಯಾಮ್‌ಸುಂದರ್ , ಕಬ್ಬಾಳರಾಜ್ ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News