ಕೆಪಿಸಿಸಿ ಚುನಾವಣಾ ಸಮಿತಿ ರಚನೆ

Update: 2018-02-25 11:34 GMT

ಬೆಂಗಳೂರು, ಫೆ.25: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ.

ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ಕೆ.ಎಚ್.ಮುನಿಯಪ್ಪ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ, ವಿಧಾನಪರಿಷತ್ ಸದಸ್ಯ ಅಲ್ಲಂ ವೀರಭದ್ರಪ್ಪ, ಸಚಿವ ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ಕೆ.ರಹ್ಮಾನ್‌ಖಾನ್, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ರಮಾನಾಥ ರೈ, ಡಾ.ಎಚ್.ಸಿ.ಮಹದೇವಪ್ಪ.

ಸಚಿವರಾದ ಎಂ.ಬಿ.ಪಾಟೀಲ್, ಎಂ.ಕೃಷ್ಣಪ್ಪ, ಕೃಷ್ಣಭೈರೇಗೌಡ, ಎಸ್.ಎಸ್. ಮಲ್ಲಿಕಾರ್ಜುನ್, ಸಂತೋಷ್ ಲಾಡ್, ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್.ಶಂಕರ್, ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ, ಮೋಟಮ್ಮ, ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಮಾಜಿ ಸಚಿವೆ ರಾಣಿ ಸತೀಶ್, ಶಾಸಕ ಸಿ.ಎಸ್.ನಾಡಗೌಡ, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ.

ಮಾಜಿ ಸಚಿವರಾದ ಅಂಬರೀಶ್, ಪಿ.ಟಿ.ಪರಮೇಶ್ವರ್ ನಾಯ್ಕ, ಶಿವರಾಜ್ ತಂಗಡಗಿ, ಸಚಿವರಾದ ಉಮಾಶ್ರೀ, ಆರ್.ರೋಷನ್‌ಬೇಗ್, ಮುಖಂಡರಾದ ಕೆ.ಬಿ.ಕೃಷ್ಣಮೂರ್ತಿ, ಸಲೀಂ ಅಹ್ಮದ್, ಸರಸಿಂಗರಾವ್ ಸೂರ್ಯವಂಶಿ, ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ರವೀಂದ್ರ ಹೆಬ್ಬಾಳ್ಕರ್, ಎನ್‌ಎಸ್‌ಯುಐ ಅಧ್ಯಕ್ಷ ಎಚ್.ಎಸ್.ಮಂಜುನಾಥ, ಪ್ಯಾರೀಜಾನ್.

ಇದಲ್ಲದೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಹಾಗೂ ರಾಜ್ಯದ ಎಲ್ಲ ಸಂಸದರು ಚುನಾವಣಾ ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News