ಬಿಬಿಎಂಪಿ ಆಯಕ್ತರಿಗೆ 50 ಸಾವಿರ ರೂ.ದಂಡ ವಿಧಿಸಿದ ಹೈಕೋರ್ಟ್

Update: 2018-02-25 12:42 GMT

ಬೆಂಗಳೂರು, ಫೆ.25: ಘನತ್ಯಾಜ್ಯ ನಿರ್ವಹಣೆ ಸಂಬಂಧ ಅಗತ್ಯ ಕ್ರಮ ತೆಗದುಕೊಳ್ಳುವಲ್ಲಿ ವಿಫಲವಾದ ಬಿಬಿಎಂಪಿ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಬಿಎಂಪಿ ಆಯುಕ್ತರಿಗೆ 50 ಸಾವಿರ ರೂ. ದಂಡ ವಿಧಿಸಿದೆ.

ಘನತ್ಯಾಜ್ಯ ನಿರ್ವಹಣೆಗಾಗಿ ವಾರ್ಡ್ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ರಿರ್ಟ್ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಾ. ಬಿ.ಎಸ್. ಪಾಟೀಲ್ ಹಾಗೂ ನ್ಯಾ. ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ ಬಿಬಿಎಂಪಿ ವಿುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಕರ್ನಾಟಕ ನಗರ ಪಾಲಿಕೆ ಕಾಯ್ದೆ ಪ್ರಕಾರ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ವಾರ್ಡ್‌ವಾರು ಸಮಿತಿಗಳನ್ನು ರಚಿಸಿ ಅವುಗಳ ನೇತೃತ್ವದಲ್ಲಿ ತ್ಯಾಜ್ಯ ನಿರ್ವಹಣೆ ಮಾಡಲು ಇರುವ ಮಾರ್ಗಗಳನ್ನು ಪರಿಶೀಲಿಸುವಂತೆ ಹೈಕೋರ್ಟ್ 2017ರ ನವೆಂಬರ್ 10ರಂದು ಬಿಬಿಎಂಪಿಗೆ ಆದೇಶಿಸಿತ್ತು.

ಆದರೆ ಬಿಬಿಎಂಪಿ ಸಲ್ಲಿಸಿದ ವರದಿ ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ನಾಲ್ಕು ತಿಂಗಳಾದರೂ ತ್ಯಾಜ್ಯ ನಿರ್ವಹಣೆ ಸಂಬಂಧ ವಾರ್ಡ್ ಸಮಿತಿ ರಚಿಸಿಲ್ಲವೇಕೆ ಎಂದು ಪ್ರಶ್ನಿಸಿತು. ಬಿಬಿಎಂಪಿ ಪರ ವಕೀಲರು ನೀಡಿದ ಸಮಜಾಯಿಸಿಗೆ ತೃಪ್ತವಾಗದ ಕೋರ್ಟ್ ಕೂಡಲೇ ವಾರ್ಡ್ ಸಮಿತಿ ಅಧಿಕಾರಿಗಳು, ಜಂಟಿ ಆಯುಕ್ತರು, ವಾರ್ಡ್ ಸಮಿತಿಯಲ್ಲಿರುವ ಜನಪ್ರತಿನಿಧಿಗಳ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಆಯುಕ್ತರು ಮುಂದಾಗಬೇಕು. ಇಲ್ಲದಿದ್ದರೆ ಬಿಬಿಎಂಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿತು. ಹಾಗೆಯೇ ಬಿಬಿಎಂಪಿ ಆಯುಕ್ತರಿಗೆ 50 ಸಾವಿರ ದಂಡ ಕಟ್ಟುವಂತೆ ಸೂಚಿಸಿತು.

ಅಲ್ಲದೆ ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥರ ವಿರುದ್ಧ ಕೈಗೊಂಡಿರುವ ಕ್ರಮಗಳು ಹಾಗೂ ವಾರ್ಡ್ ಸಮಿತಿಗಳ ಕಾರ್ಯನಿರ್ವಹಣೆ ಕುರಿತು ವರದಿಯ ಜೊತೆಗೆ ಅಫಿಡವಿಟ್ ಸಲ್ಲಿಸಬೇಕು ಎಂದು ನಿರ್ದೇಶಿಸಿತು. ಹಿಂದೆ ನೀಡಿದ್ದ ಆದೇಶ ಪಾಲನೆಗೆ ಒಂದು ತಿಂಗಳು ಕಾಲವಕಾಶ ಕೋರಿದ ಪಾಲಿಕೆ ಪರ ವಕೀಲ ಕೆ.ಎನ್.ಪುಟ್ಟೇಗೌಡ ಅವರ ವಾದ ಪುರಸ್ಕರಿಸಿದ ನ್ಯಾಯಪೀಠ, ಮಾ ರ್ 28ಕ್ಕೆ ವಿಚಾರಣೆ ಮುಂದೂಡಿತು.

ಘನತ್ಯಾಜ್ಯ ನಿರ್ವಹಣೆಗೆ ನಗರದ ಎಲ್ಲ ವಾರ್ಡ್‌ಗಳಲ್ಲೂ ಸಮಿತಿಗಳನ್ನು ರಚಿಸಿ ತಿಂಗಳಿಗೊಂದು ಸಭೆ ನಡೆಸಬೇಕು. ತ್ಯಾಜ್ಯ ವಿಲೇವಾರಿಗೆ ಹೆಚ್ಚುವರಿ ಸ್ಥಳಗಳನ್ನು ಗುರುತಿಸಬೇಕು. ಆಯಾ ವಾರ್ಡ್ ವ್ಯಾಾಪ್ತಿಯ ಜನರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಈ ಹಿಂದೆ ನ್ಯಾಾಯಾಲಯ ಆದೇಶಿಸಿದ್ದರೂ ಪಾಲಿಕೆ ತಲೆಕೆಡಿಸಿಕೊಂಡಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News