×
Ad

ಬೆಂಗಳೂರು: ಶೋಭಾ ಕರಂದ್ಲಾಜೆ ಆರೋಪಕ್ಕೆ ದಲಿತ ಸಂಘಟನೆಗಳ ಖಂಡನೆ

Update: 2018-02-26 18:58 IST

ಬೆಂಗಳೂರು, ಫೆ. 26: ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹಿಂದುಳಿದ-ದಲಿತ ಜನಾಂಗದ ಅಭಿವೃದ್ದಿಗೆ ಶ್ರಮಿಸುತ್ತಿರುವುದನ್ನು ಸಹಿಸದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಂಜನೇಯವರ ಚಾರಿತ್ರ್ಯವಧೆ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಆದಿ ಜಾಂಬವ ಸಂಘ ಸೇರಿದಂತೆ ರಾಜ್ಯದ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮಿ ನಾರಾಯಣ ನಾಗವಾರ ಮಾತನಾಡಿ, ಮಂತ್ರಿಗಳು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವುದು ಸಾಮನ್ಯ ಸಂಗತಿ. ಶೋಭಾ ಕರಂದ್ಲಾಜೆ ಸಚಿವರಾಗಿದ್ದಾಗ ತಮ್ಮ ಸ್ವಕ್ಷೇತ್ರ ಯಶವಂತಪುರಕ್ಕೆ ಹೆಚ್ಚು ಸರಕಾರದ ಅನುದಾನ ತಂದಿದ್ದರು. ಸಚಿವ ಆಂಜನೇಯ ಹೊಳಲ್ಕೆರೆ ಕ್ಷೇತ್ರಕ್ಕೆ ಕೊಳವೆ ಭಾವಿ ಮಂಜೂರು ಮಾಡಿರುವುದನ್ನೆ ನೆಪವಾಗಿಟ್ಟುಕೊಂಡು ಅವರ ಚಾರಿತ್ರ್ಯವಧೆ ಮಾಡಲು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದರು.

ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಧಿ ವ್ಯರ್ಥವಾಗದಂತೆ ಸದ್ಭಳಕೆ ಮಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ 34ಸಾವಿರ ಕೊಳವೆ ಭಾವಿ ಕೊರೆಸಲು ಮುಂದಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ರಾಜಕೀಯ ದುರುದ್ದೇಶದಿಂದ ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News