ಬೆಂಗಳೂರು: ಮಾ.3ರಿಂದ ‘ರಾಜ್ಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್’ ಕ್ರೀಡಾಕೂಟ

Update: 2018-02-26 14:10 GMT

ಬೆಂಗಳೂರು, ಫೆ. 26: ಚನ್ನಭೈರೇಗೌಡ ಸ್ಮರಣಾರ್ಥ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಮಾ.3 ಹಾಗೂ 4ರಂದು 37ನೇ ‘ರಾಜ್ಯ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್’ ಕ್ರೀಡಾ ಸ್ಪರ್ಧೆಯನ್ನು ಹೊಸಕೋಟೆಯ ಬಿ.ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ಟಿ.ಎಸ್.ಸತೀಶ್, ನಾಗರಿಕರ ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಳೆದ 36ವರ್ಷಗಳಿಂದ ಕ್ರೀಡಾಕೂಟ ಆಯೋಜಿಸುತ್ತಾ ಬರುತ್ತಿದ್ದೇವೆ ಎಂದರು.

30ರಿಂದ 85ವರ್ಷದ ಪುರುಷರು-ಮಹಿಳೆಯರು ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 400ಕ್ಕೂ ಹೆಚ್ಚು ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾದ ಕ್ರೀಡಾಪಟುಗಳನ್ನು ಫೆ.11ರಿಂದ 15ರವರೆಗೆ ಮಂಗಳೂರಿನಲ್ಲಿ ಯೋಜಿಸಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕಳುಹಿಸಿಕೊಡಲಾಗುವುದೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಚ್.ಜಯರಾಮಯ್ಯ, ಸಂಘಟನ ಕಾರ್ಯದರ್ಶಿ ಪಿ.ಎಸ್.ಬಿ ನಾಯ್ಡು, ಖಜಾಂಚಿ ಡಾ.ಎಸ್.ನರಸಿಂಹರಾವ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News