9 ಕೋಟಿ ವೆಚ್ಚದ ಕೂರಾಡಿ-ನೀಲಾವರ ಸೇತುವೆ ಉದ್ಘಾಟನೆ
Update: 2018-02-26 21:57 IST
ಉಡುಪಿ, ಫೆ. 26: ಕೂರಾಡಿ -ನೀಲಾವರ ರಸ್ತೆಯ ಸೀತಾನದಿಗೆ ಒಂಭತ್ತು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪಂಚಮಿಖಾನಾ ಸೇತುವೆ ಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೋಮವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವರು, ಕಳೆದ ಐದು ವರ್ಷಗಳ ಅವಧಿಯಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿಗೆ 2003 ಕೋಟಿ ರೂ.ಗಳ ಅನುದಾನವನ್ನು ತರಲಾಗಿದ್ದು, 88 ಕೋಟಿ ರೂ. ವೆಚ್ಚದಲ್ಲಿ ಸೇತುವೆಗಳನ್ನು ನಿರ್ಮಿಸಲಾಗಿದೆ. ಪೆರಂಪಳ್ಳಿ- ಮಣಿಪಾಲ ಸೇತುವೆ ಕಾಮಗಾರಿ ಪೂರ್ಣಗೊಂಡರೆ ಮಣಿಪಾಲಕ್ಕೆ ನೀಲಾವರದಿಂದ 10 ನಿಮಿಷಗಳ ಅವಧಿಯಲ್ಲಿ ತಲುಪಲು ಸಾಧ್ಯವಾಗುತ್ತದೆ. ಸಂಪರ್ಕ ಸೇತುವೆಗಳಿಂದ ಎಲ್ಲರಿಗೂ ಅನುಕೂಲವಾಗಿದೆ ಎಂದರು.
ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಆಶಾ ಕೋಟ್ಯಾನ್, ರಘುರಾಮ್ ಮಧ್ಯಸ್ಥ ಮೊದಲಾದವರು ಉಪಸ್ಥಿತರಿದ್ದರು.