×
Ad

ಬೆಂಗಳೂರು : ಮಾಜಿ ಯೋಧನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Update: 2018-03-01 16:28 IST

ಬೆಂಗಳೂರು, ಮಾ1:ಮಾಜಿ ಯೋಧನೊಬ್ಬನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಇಲ್ಲಿನ ಜ್ಞಾನ ಭಾರತೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಜಿ ಯೋಧನಾಗಿರುವ ಸತೀಶ್ ಎಂಬುವರ ದಾಳಿ ನಡೆದಿದ್ದು, ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಫೆಬ್ರವರಿ 28 ರ ರಾತ್ರಿ ನಾಗದೇವನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು, ಹಣ, ಒಡವೆ, ಮೊಬೈಲ್‌ ಕಸಿದುಕೊಳ್ಳಲು ದುಷ್ಕರ್ಮಿಗಳು ಮುಂದಾಗಿದ್ದು, ಕೂದಲೆಳೆ ಅಂತರದಲ್ಲಿ ಸತೀಶ್ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News