ಮಾ.11: ಎರಡನೇ ಹಂತದ ಪಲ್ಸ್ ಪೋಲಿಯೊ
ಉಡುಪಿ, ಮಾ.1:ಎರಡನೇ ಹಂತದ ಪಲ್ಸ್ ಪೊಲೀಯೊ ಕಾರ್ಯಕ್ರಮ ಮಾ.11ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿಪಿ್ರಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಉಡುಪಿಯಲ್ಲಿ ಮಾ.11ರಂದು ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಪಲ್ಸ್ ಪೋಲಿಯೊದ ಯಶಸ್ಸಿಗೆ ಕುಂದಾಪುರದ ಸಹಾಯಕ ಆಯುಕ್ತರ ಅಧ್ಯಕ್ಷತೆ ಯಲ್ಲಿ ತಾಲೂಕು ಸಮನ್ವಯ ಸಮಿತಿ ಸಭೆ ನಡೆಸಲು ಸೂಚಿಸಿದ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವ್ಯಾಪ್ತಿಯಡಿ ಬರುವ 158 ಗ್ರಾಪಂ ಗ ಸಹಕಾರ ಪಡೆಯಲು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಡಿ ಬರುವ ಕಾರ್ಮಿಕರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸಲು ಸೂಚಿಸಬೇಕೆಂದು ಇಲಾಖೆ ಅಧಿಕಾರಿ ಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪೌರಾಯುಕ್ತರು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಲು ಸೂಚಿಸಿದರು. ಶಾಲಾ ಮಕ್ಕಳಿಗೆ ಮಾಹಿತಿ ನೀಡಲು ವಿದ್ಯಾಂಗ ಉಪನಿರ್ದೇಶಕರಿಗೆ, ಅಂಗನವಾಡಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ ಖೆಗೆ ಸೂಚನೆಗಳನ್ನು ನೀಡಿದರು.
ಮಣಿಪಾಲ ಕೆಎಂಸಿ, ರೋಟರಿ ಕ್ಲಬ್, ಲಯನ್ಸ್ ಕ್ಲಬ್‌ಗಳ ಸಹಕಾರ ಪಡೆಯುವಂತೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗಳು ನಿಗಾ ಇರಿಸಿ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ, ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.