ನಿವೃತ್ತರಾದ ಹೆಬ್ರಿ ಠಾಣೆಯ ಪಿಎಸ್‌ಐ ಟಿ.ಟಿ.ಜಗನ್ನಾಥರಿಗೆ ಸನ್ಮಾನ
Update: 2018-03-01 21:43 IST
ಉಡುಪಿ, ಮಾ. 1: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ದಲಿತರ ಕುಂದುಕೊರತೆ ಸಭೆಯ ಕೊನೆಯಲ್ಲಿ ಪೊಲೀಸ್ ಇಲಾಖೆಯಲ್ಲಿ 37 ವರ್ಷಗಳ ಕಾಲ ವಿವಿಧ ಠಾಣೆಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಹೆಬ್ರಿ ಠಾಣೆಯ ಪಿಎಸ್‌ಐ ಆಗಿ ಸೇವಾ ನಿವೃತ್ತರಾದ ಟಿ.ಟಿ.ಜಗನ್ನಾಥ ಇವರನ್ನು ಎಸ್ಪಿ ಲಕ್ಷ್ಮಣ್ ನಿಂಬರಗಿ ಹಾಗೂ ಎಎಸ್ಪಿ ಕುಮಾರಚಂದ್ರ ಇವರು ಸನ್ಮಾನಿಸಿ, ಬೀಳ್ಕೊಟ್ಟರು.