ದೇಶದ ಉನ್ನತ್ತಿಗೆ ವಿಜ್ಞಾನ ತಂತ್ರಜ್ಞಾನ ಅಗತ್ಯ : ಬಿ.ಆರ್. ಗುರುಪ್ರಸಾದ್
ಮಂಗಳೂರು, ಮಾ.1: ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ಜನರಿಗೆ ಅರಿವು ನೀಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ದೇಶದ ಅಭಿವೃದ್ಧಿಗೆ ಇದು ಅತ್ಯಗತ್ಯ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿ ಬಿ.ಆರ್. ಗುರುಪ್ರಸಾದ್ ಹೇಳಿದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊ ಸೊಸೈಟಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ನಗರದ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವು ಮುಂದಿನ ಮನುಕುಲಕ್ಕೆ ದೊರೆಯುವಂತಾಗಬೇಕು. ಅದಕ್ಕಾಗಿ ಅವುಗಳನ್ನು ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಬಿ.ಆರ್.ಗುರುಪ್ರಸಾದ್ ನುಡಿದರು.
ಪಿಲಿಕುಳ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಕಾರ್ಯದರ್ಶಿ ಪ್ರಸನ್ನ,ಪ್ರೊ.ಚಂದ್ರಶೇಖರ್ ಶೆಟ್ಟಿ, ಡಾ.ಸಿ.ಕೆ. ಮಂಜುನಾಥ ಉಪಸ್ಥಿತರಿದ್ದರು. ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ಶಿವರಾಮ್ ವಂದಿಸಿದರು.
ಜಿಲ್ಲೆಯ ಆಯ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಚಿತ್ರಕಲೆ ಸ್ಪರ್ಧೆಯಲ್ಲಿ ಸಿರಿ ಸುಭಾಸ್ ಪ್ರಥಮ, ರಾಹುಲ್ ರಮೇಶ್ ದ್ವಿತೀಯ, ಗಣೇಶ್ ನಾಯಕ್ ತೃತೀಯ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜೇಶ್ವರಿ ಜೆ. ಶೆಟ್ಟಿ ಪ್ರಥಮ, ಸೃಜನ್ ಎಸ್. ಭಟ್ ದ್ವೀತಿಯ,ಓಂಕಾರ್ ಭಟ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಪ್ರಥಮ ದರ್ಜೆ, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೃನಾಲಿ ಮತ್ತು ಫರೀಹಾ ಥಬನಾಥ್ ಪ್ರಥಮ, ಶ್ರಾವ್ಯ ಎಸ್. ಕುಮಾರ್ ಮತ್ತು ವಿಶ್ವಜಿತ್ ಪಿ. ದ್ವಿತೀಯ ಹಾಗೂ ಸ್ತುತಿ ಅರ್.ಜಿ. ಮತ್ತು ಶ್ರೇಯ ಶೆಟ್ಟಿ ತೃತೀಯ ಸ್ಥಾನ ಪಡೆದಿರುತ್ತಾರೆ.
ವಿಶೇಷ ಆಕರ್ಷಣೆಯಾಗಿ ಜಿಲ್ಲೆಯ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ, ಇಸ್ರೋ ಸಂಸ್ಥೆಯಿಂದ ವಾಟರ್ ರಾಕೆಟ್ ಶೋ ಮತ್ತು ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರೋನ್ ಶೋ ಕಾರ್ಯಕ್ರಮ ಆಯೋಜಿಸಲಾಗಿತ್ತು.