ಪಿಲಿಕುಳ ತಾರಾಲಯ ಲೋಕಾರ್ಪಣೆ...
Update: 2018-03-01 23:35 IST
ಮಂಗಳೂರಿನ ಪಿಲಿಕುಳದ ಡಾ.ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ಭಾರತದ ಪ್ರಥಮ ‘ಸ್ವಾಮಿ ವಿವೇಕಾನಂದ’ ತ್ರಿಡಿ 8ಕೆ ಹೈಬ್ರಿಡ್ ತಾರಾಲಯವನ್ನು ರಾಜ್ಯ ಯೋಜನೆ, ಸಾಂಖ್ಯಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತಾರಾಂ ಗುರುವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಅರಣ್ಯ ಸಚಿವ ಬಿ.ರಮಾನಾಥ ರೈ, ಮನಪಾ ಮೇಯರ್ ಕವಿತಾ ಸನಿಲ್, ಶಾಸಕರಾದ ಜೆ.ಆರ್.ಲೋಬೊ, ಕೆ.ಅಭಯಚಂದ್ರ ಜೈನ್, ಬಿ.ಎ.ಮೊಯ್ದಿನ್ ಬಾವ, ಇಸ್ರೋದ ಪಿಆರ್‌ಒ ಗುರುಪ್ರಸಾದ್, ಪ್ರಾದೇಶಿಕ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಎಚ್. ಹೊನ್ನೇಗೌಡ, ಡಾ. ಕೆ.ವಿ. ರಾವ್, ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ. ಪ್ರಸನ್ನ, ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಕೊಂಕಣಿ ಅಕಾಡಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಅಧಿಕಾರಿಗಳಾದ ಪ್ರಭಾಕರ ಶರ್ಮಾ, ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.