×
Ad

ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ರಥಕ್ಕೆ ಚಾಲನೆ

Update: 2018-03-02 22:27 IST

ಉಡುಪಿ, ಮಾ.2: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕೇಂದ್ರ ಸರಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ಒದಗಿಸುವ ಪ್ರಧಾನ ಮಂತ್ರಿ ಉಜ್ವಲ್ ರಥಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಉಡುಪಿ- ಚಿಕ್ಕಮಗಳೂರು ಹಾಗೂ ಶಿವ ಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಈ ರಥವನ್ನು ಒದಗಿಸಲಾಗಿದ್ದು, ಈ ರಥವು ನಾಳೆ ಯಿಂದ ಉಡುಪಿ ಜಿಲ್ಲೆಯ 30 ಹಾಗೂ ಚಿಕ್ಕಮಗಳೂರು ಜಿಲ್ಲೆಯ 30 ಗ್ರಾಮ ಗಳಿಗೆ ತೆರಳಿ ಉಜ್ವಲ್ ಯೋಜನೆ ಮತ್ತು ಇತರ ಕೇಂದ್ರ ಸರಕಾರದ ಯೋಜನೆ ಗಳ ಕುರಿತು ಮಾಹಿತಿ ಒದಗಿಸಲಿದೆ ಎಂದರು.

ಉಜ್ವಲ್ ಯೋಜನೆಯಡಿ ಉಡುಪಿ ಜಿಲ್ಲೆಯ 11,460 ಕುಟುಂಬಗಳಿಗೆ ಉಚಿತ ಗ್ಯಾಸ್ ಸಂರ್ಪಕವನ್ನು ಕಲ್ಪಿಸಲಾಗಿದೆ. 2011ರ ಸಾಮಾಜಿಕ ಮತ್ತು ಆರ್ಥಿಕ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 33,600 ಕುಟುಂಬಗಳು ಈ ಯೋಜನೆಗೆ ಅರ್ಹವಾಗಿದ್ದು, ಇನ್ನು 22ಸಾವಿರ ಮಂದಿ ಈ ಯೋಜನೆಯನ್ನು ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಈ ರಥ ಹೆಚ್ಚು ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡ ರಾದ ಉದಯ ಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಟಪಾಡಿ ಶಂಕರ ಪೂಜಾರಿ, ಕಿರಣ್ ಬೈಲೂರು, ಸುಪ್ರಸಾದ್ ಶೆಟ್ಟಿ, ಶ್ಯಾಮಲಾ ಕುಂದರ್, ರೇಷ್ಮಾ ಉದಯ ಶೆಟ್ಟಿ, ಸಂಧ್ಯಾ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News