×
Ad

ಉದೋಗ ಸೃಷ್ಠಿಯಲ್ಲಿ ಕರ್ನಾಟಕ ಮುಂದು: ಆರ್. ದ್ರುವನಾರಾಯಣ

Update: 2018-03-02 23:43 IST

ಚಾಮರಾಜನಗರ, ಮಾ. 2: ಉದೋಗ ಸೃಷ್ಠಿಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಲೋಕ ಸಭಾ ಸದಸ್ಯರಾದ ಆರ್. ದ್ರುವನಾರಾಯಣ ತಿಳಿಸಿದರು.

ನಗರದ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಉದ್ಯೋಗ ಕಲ್ಪಿಸುವ ಸಲುವಾಗಿ ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದೆ. ಇದುವರೆಗೆ 12.5 ಲಕ್ಷ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನೀಡಿದೆ. ಈ ಮೂಲಕ ದೇಶದಲ್ಲೆ ಉದ್ಯೋಗ ಸೃಷ್ಠಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.

ಇಂದು ಪದವಿ ಪಡೆದವರು ಸಾಕಷ್ಟು ಮಂದಿ ಇದ್ದಾರೆ. ಎಲ್ಲರಿಗೂ ಉದ್ಯೋಗ ಅವಕಾಶಗಳು ಲಭಿಸಬೇಕಾದರೆ ಯಾವುದಾದರೂ ಕೌಶಲ್ಯ ಇರಲೇಬೇಕಿದೆ. ಇದಕ್ಕಾಗಿಯೇ ಎಲ್ಲಾ ಜಿಲ್ಲೆಗಳಲ್ಲೂ ಕೌಶಲ ತರಬೇತಿ ನೀಡುವ ಸಲುವಾಗಿ ಕೇಂದ್ರಗಳನ್ನು ತೆರೆಯಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪಿಸಲಾಯಿತು ಎಂದು ದ್ರುವನಾರಾಯಣ ತಿಳಿಸಿದರು.

ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿಯಲ್ಲಿ 1600 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಪ್ರದೇಶ ಅಭಿವೃದ್ಧಿಯಾಗುತ್ತಿದೆ. ಕೈಗಾರಿಕೆ ಘಟಕಗಳು ಸ್ಥಾಪನೆಯಾದರೆ ಜಿಲ್ಲೆಯ ಯುವ ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗಪಡೆಯಲು ಅವಕಾಶ ಲಭಿಸಲಿದೆ ಎಂದು ದ್ರುವನಾರಾಯಣ ಅಭಿಪ್ರಾಯಪಟ್ಟರು.

ಮೈಸೂರು ಅರಗು ಮತು ಬಣ್ಣದ ಕಾರ್ಖಾನೆ ಅಧ್ಯಕ್ಷರಾದ ಹೆಚ್.ಎ. ವೆಂಕಟೇಶ್ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಕೌಶಲ್ಯಕ್ಕೆ ಹೆಚ್ಚು ಬೇಡಿಕೆ ಇದೆ. ಹೀಗಾಗಿ ಒಂದಿಲ್ಲೊಂದು ಕೌಶಲ ತರಬೇತಿ ಹೊಂದಿದರೆ ಉದ್ಯೋಗ ಅವಕಾಶಗಳನ್ನು ಪಡೆಯಲು ಸಾಧ್ಯವಾಗಲಿದೆ. ಯುವ ಸಮೂಹ ಈ ಬಗ್ಗೆ ಆಸಕ್ತರಾಗಬೇಕು ಎಂದು ಸಲಹೆ ಮಾಡಿದರು.

ನಗರ ಸಭೆ ಅಧ್ಯಕ್ಷರಾದ ಶೋಭಾ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿ ಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News