×
Ad

'ಆರೋಗ್ಯ ಕರ್ನಾಟಕ ಯೋಜನೆ'ಗೆ ಚಾಲನೆ

Update: 2018-03-02 23:54 IST

ಸಿಎಂ ಸಿದ್ದರಾಮಯ್ಯ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಎಲ್ಲರಿಗೂ ಆರೋಗ್ಯ ಸೇವೆಯನ್ನು ಒದಗಿಸುವಂತಹ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕೋಟಿ 43ಲಕ್ಷ ಕುಟುಂಬಗಳಿದ್ದು, ಬಿಪಿಎಲ್ ಕುಟುಂಬಗಳಿಗೆ ಉಚಿತ ಹಾಗೂ ಎಪಿಎಲ್ ಕುಟುಂಬಗಳಿಗೆ ಶೇ.30ರಷ್ಟು ರಿಯಾಯ್ತಿ ದರದಲ್ಲಿ ಆರೋಗ್ಯ ಸೇವೆಯನ್ನು ನೀಡಲು 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಜಾರಿ ಮಾಡಲಾಗಿದೆ. ಇಂತಹ ಜನಪರ ಯೋಜನೆ ದೇಶ ಯಾವುದೆ ರಾಜ್ಯದಲ್ಲಿಲ್ಲ. ಹೀಗಾಗಿ ಆರೋಗ್ಯ ಸೇವೆ ಒದಗಿಸುವಲ್ಲಿ ನಮ್ಮ ಸರಕಾರ ಪ್ರಥಮ ಸ್ಥಾನದಲ್ಲಿದೆ ಎಂಬುದಕ್ಕೆ ನನಗೆ ಹೆಮ್ಮೆ ಆಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor