ಮೆಲ್ಕಾರ್: ಬಂಟ್ವಾಳ ಆರ್.ಟಿ.ಒ. ಕಚೇರಿ ಲೋಕಾರ್ಪಣೆ

Update: 2018-03-03 07:32 GMT

ಬಂಟ್ವಾಳ, ಮಾ.3: ಈ ಭಾಗದ ಬಹುದಿನದ ಬೇಡಿಕೆಯಾದ ಬಂಟ್ವಾಳ ಸಹಾಯಕ ಪ್ರಾದೇಶಿಕ ಕಚೇರಿ(ಆರ್.ಟಿ.ಒ.)ಯು ಮೆಲ್ಕಾರ್ ನಲ್ಲಿ ಶನಿವಾರ ಲೋಕಾರ್ಪಣೆಗೊಂಡಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೂತನ ಕಚೇರಿಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರಿಗೆ‌ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಜಮೀನು ಒದಗಿಸಲಾಗುವುದು ಎಂದರು.

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ‌ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಪಿಯೂಸ್ ರೊಡ್ರಿಗಸ್, ತಾಪಂ ಸದಸ್ಯ ಸಂಜೀವ ಪೂಜಾರಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಬೆಳ್ತಂಗಡಿ, ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಬಿ.ಶಿವರಾಜ ಪಾಟೀಲ, ಜಂಟಿ ಸಾರಿಗೆ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ, ಮಂಗಳೂರಿನ ಉಪ ಸಾರಿಗೆ ಆಯುಕ್ತ ಜಿ.ಎಸ್.ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.

ಸಾರಿಗೆ ಆಯುಕ್ತ ಬಿ.ದಯಾನಂದ ಪ್ರಸ್ತಾವಿಸಿ, ಸ್ವಾಗತಿಸಿದರು. ಇದೇ ವೇಳೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ಪರವಾನಿಗೆ, ಆರ್.ಸಿ.ಯನ್ನು ವಿತರಿಸಲಾಯಿತು.

 ನೂತನವಾಗಿ ಆರಂಭವಾಗಿರುವ ಬಂಟ್ವಾಳ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿಯಾಗುವ ವಾಹನಗಳು ಕೆಎ-70 ಸಂಖ್ಯೆಯಲ್ಲಿ ರಸ್ತೆಗಿಳಿಯಲಿವೆ. ನೂತನ ಕಚೇರಿಯಿಂದಾಗಿ ಮಂಗಳೂರು ಆರ್.ಟಿ.ಒ. ಕಚೇರಿಯಲ್ಲಿ ಕೆಲಸದ ಹೊರೆ ಕಡಿಮೆಯಾಗಲಿದೆ. ಸುಮಾರು ಎಂಟು ಸಿಬ್ಬಂದಿಯನ್ನು ಬಂಟ್ವಾಳ ಆರ್.ಟಿ.ಒ. ಕಚೇರಿಗೆ ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News