ಪರಪ್ಪನ ಅಗ್ರಹಾರದ ಅವ್ಯವಹಾರ ಆರೋಪ: ಸತ್ಯನಾರಾಯಣರಾವ್ ವಿರುದ್ಧ ಎಸಿಬಿ ಮೊಕದ್ದಮೆ

Update: 2018-03-03 16:31 GMT

ಬೆಂಗಳೂರು, ಮಾ.3: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಅವ್ಯವಹಾರ ಆರೋಪ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಸಮಿತಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕಾರಾಗೃಹಗಳ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಚ್.ಎನ್.ಸತ್ಯನಾರಾಯಣರಾವ್ ವಿರುದ್ಧ ಮೊಕದ್ದಮೆ ದಾಖಲಿಸಿದೆ.

ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಜೆ ಕೈದಿ ತಮಿಳುನಾಡಿನ ಶಶಿಕಲಾ ಅವರಿಗೆ ಕಾರಾಗೃಹ ನಿಯಮಗಳನ್ನು ಉಲ್ಲಂಘಿಸಿ ವಿಶೇಷ ಸವಲತ್ತುಗಳನ್ನು ಕಲ್ಪಿಸಿರುವ ಆಪಾದನೆಯ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಅನ್ವಯ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಎಸಿಬಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News