ವಿದ್ವತ್ ಅಣ್ಣನ ಹೇಳಿಕೆ ಪಡೆದ ಸಿಸಿಬಿ
Update: 2018-03-04 20:04 IST
ಬೆಂಗಳೂರು, ಮಾ.4: ಶಾಂತಿನಗರ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉದ್ಯಮಿ ಪುತ್ರ ವಿದ್ವತ್ ಅಣ್ಣ ಸಾತ್ವಿಕ್‌ನ ಹೇಳಿಕೆಯನ್ನು ಸಿಸಿಬಿ ಪೊಲೀಸರು ರವಿವಾರ ದಾಖಲಿಸಿಕೊಂಡರು.
ವಿದ್ವತ್ ಮೇಲೆ ಹಲ್ಲೆ ನಡೆದ ಬಳಿಕ ಆತನ ಸ್ನೇಹಿತರು ಮೊಬೈಲ್ ಕರೆ ಮೂಲಕ ನನಗೆ ವಿಷಯ ತಿಳಿಸಿದ್ದರು. ನಾನು ಸ್ಥಳಕ್ಕೆ ಬರುವಷ್ಟರಲ್ಲಿ ವಿದ್ವತ್‌ನನ್ನು ನಗರದ ಮಲ್ಯ ಅಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಬಂದಾಗ ಮುಹಮ್ಮದ್ ನಲಪಾಡ್, ಆತನ ಸಹಚಾರರು ಬಂದಿದ್ದರು. ಈ ವೇಳೆ ಅವರು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದರು ಎಂದು ಸಾತ್ವಿಕ್ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ.