ಮೈಸೂರು: ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ
Update: 2018-03-04 20:25 IST
ಮೈಸೂರು,ಮಾ.4: ನಗರದ ಹೊರವಲಯದಲ್ಲಿರುವ ಅಲೋಕಾ ಪ್ಯಾಲೇಸ್ ಸುತ್ತಮುತ್ತ ಆಗಾಗ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಮೈಸೂರು ಹೊರವಲಯದ ಇಲವಾಲ ಬಳಿ ಇರುವ ಅಲೋಕಾ ಪ್ಯಾಲೇಸ್ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 7ವರ್ಷ ಪ್ರಾಯದ ಚಿರತೆ ಸೆರೆಯಾಗಿದೆ. ಇಲವಾಲದ ಸುತ್ತಮುತ್ತ ಚಿರತೆ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಬೋನು ಇಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.
ಇಂದು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟ ದಿನವೇ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಸೆರೆ ಸಿಕ್ಕ ಚಿರತೆಯನ್ನು ನಾಗರಹೊಳೆ ಅರಣ್ಯಕ್ಕೆ ಬಿಡಲು ಅರಣ್ಯಾಧಿಕಾರಿಗಳು ತೀರ್ಮಾನಿಸಿದ್ದಾರೆ.