ಲಾರಿ ಢಿಕ್ಕಿ: ಪಾದಾಚಾರಿ ಮೃತ್ಯು
Update: 2018-03-04 22:14 IST
ಕೋಟ, ಮಾ.4: ಐರೋಡಿ ಗ್ರಾಮದ ಮಾಬುಕಳ ಬಸ್ ನಿಲ್ದಾಣ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9.30ರ ಸುಮಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಪ್ರಕಾಶ್ ರಾವ್ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಇನ್ಸುಲೇಟರ್ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.