ಮಂಗಳೂರು: ಕೊಲೆ ಪ್ರಕರಣದ ಆರೋಪಿ ಸೆರೆ
Update: 2018-03-04 22:57 IST
ಮಂಗಳೂರು,ಮಾ.4: ಅಡ್ಯಾರ್‌ನಲ್ಲಿ ನಡೆದ ಸದಾಶಿವ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದಾಶಿವ ಅಡ್ಯಾರ್‌ನ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಪಾನಮತ್ತರಾಗಿ ಮಾಲಕನ ಜತೆ ವಾಗ್ವಾದಕ್ಕಿಳಿದಿದ್ದರು. ಈ ಸಂದರ್ಭ ಮಾಲಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಗಂಭೀರ ಗಾಯಗೊಂಡಿದ್ದ ಸದಾಶಿವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.