ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ: ಸಿ.ಎಂ ಸಿದ್ದರಾಮಯ್ಯ

Update: 2018-03-05 12:27 GMT

ಬೆಂಗಳೂರು, ಮಾ. 5: ಕರ್ನಾಟಕ ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ. ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಣೆ ನೀಡಿದ್ದಾರೆ.

ಒಂದು ವೇಳೆ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದೆ ಆದರೆ, ಅಕ್ರಮ ಭೂ ಡಿ-ನೋಟಿಫೈ ಹಗರಣದಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ ಸ್ಥಿರ ಮತ್ತು ಭ್ರಷ್ಟಾಚಾರ ಮುಕ್ತ ಸರಕಾರ ನೀಡುವ ಬಗ್ಗೆ ಜನರಿಗೆ ಹೇಗೆ ಮನವರಿಕೆ ಮಾಡಿಕೊಡುತ್ತಾರೆಂಬ ಬಗ್ಗೆ ಬಿಜೆಪಿ ಚಿಂತಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ತ್ರಿಪುರಾ ಚುನಾವಣಾ ಫಲಿತಾಂಶ ಪ್ರಭಾವ ಬೀರುವುದಿಲ್ಲ. ಇಲ್ಲಿ ಮೋದಿ ಅಲೆಯಂತೂ ಇಲ್ಲವೆ ಇಲ್ಲ. 2014ರ ಲೋಕಸಭೆ ಚುನಾವಣೆ ನಂತರ ಬಿಜೆಪಿ 50 ಲೋಕಸಭಾ ಕ್ಷೇತ್ರಗಳಲ್ಲಿ ವಿಧಾನಸಭಾ ಸ್ಥಾನಗಳನ್ನು ಕಳೆದುಕೊಂಡಿದೆ. ಎರಡು ಲೋಕಸಭಾ ಸ್ಥಾನಗಳನ್ನಷ್ಟೇ ಗೆದ್ದಿದೆ. ಇದನ್ನು ಗಮನಿಸಿದರೆ ರಾಜ್ಯದಲ್ಲಿ ಮೋದಿ ಅಲೆ ಇಲ್ಲ ಎಂದು ಸಿದ್ದರಾಮಯಯ್ಯ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News