ಮಡಿಕೇರಿ: ಅರಣ್ಯ ಅಧಿಕಾರಿಗೆ ಶ್ರದ್ದಾಂಜಲಿ ಸಭೆ
Update: 2018-03-05 23:16 IST
ಮಡಿಕೇರಿ, ಮಾ.5: ಅರಣ್ಯ ಸಂರಕ್ಷಣಾಧಿಕಾರಿಯಾಗಿ ನಾಗರಹೊಳೆ ಅಭಯಾರಣ್ಯದಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟ ಎಸ್.ಮಣಿಕಂದನ್ ಅವರ ನಿಧನಕ್ಕೆ ಜಿಲ್ಲಾಡಳಿತ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎರಡು ನಿಮಿಷ ಮೌನಾಚರಣೆ ಮಾಡಿ ಶ್ರಂದ್ದಾಜಲಿ ಸಲ್ಲಿಸಲಾಯಿತು.
ಶ್ರದ್ದಾಂಜಲಿ ಸಲ್ಲಿಸುವುದುಕ್ಕೂ ಮೊದಲು ಮಾತನಾಡಿದ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, 2001 ರಲ್ಲಿ ಭಾರತೀಯ ಅರಣ್ಯ ಸೇವೆಗೆ ಸೇರಿದ ಮಣಿಕಂದನ್ ಅವರು ಅರಣ್ಯ ಇಲಾಖೆಯಲ್ಲಿ ಉತ್ತಮ ಜನಪರ ಸೇವೆ ಸಲ್ಲಿಸಿ ಇತರರಿಗೆ ಮಾದರಿಯಾಗಿದ್ದರು. ಜೊತೆಗೆ ಸೇವಾ ದಕ್ಷತೆಗೆ ಹೆಸರಾಗಿದ್ದರು ಎಂದು ಅವರನ್ನು ಸ್ಮರಿಸಿದರು. ಈ ವೇಳೆ ನಾನಾ ಇಲಾಖೆ ಅಧಿಕಾರಿಗಳು ಸಿಬ್ಬಂಧಿಗಳು ಹಾಜರಿದ್ದರು.