×
Ad

ಉದ್ಯಾವರ: ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಗದ್ದೆಗೆ ಬೆಂಕಿ

Update: 2018-03-06 16:22 IST

ಉಡುಪಿ, ಮಾ. 6: ಇಲ್ಲಿಗೆ ಸಮೀಪದ ಉದ್ಯಾವರ ಬಲಾಯಿಪಾದೆ ಎಂಬಲ್ಲಿ ಮಂಗಳವಾರ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆಗಳ ಕಾಲ ಶ್ರಮ ವಹಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಈ ಜಾಗದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದು ವಿದ್ಯುತ್ ಶಾರ್ಟ್ ಸರ್ಕಿಟ್  ನಿಂದ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News