ಜೈಲಿಗೆ ಹೋಗಿ ಬಂದವರನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ: ಸಿದ್ದರಾಮಯ್ಯ
Update: 2018-03-06 20:10 IST
ಹೊಸದಿಲ್ಲಿ/ ಬೆಂಗಳೂರು, ಮಾ. 6: ನಾವು ಬಿಜೆಪಿಯವರಂತೆ ಜೈಲಿಗೆ ಹೋಗಿ ಬಂದವರನ್ನು ಸೇರಿಸಿಕೊಂಡಿಲ್ಲ. ಅಶೋಕ್ ಖೇಣಿ ಶಾಸಕರು ಮಾತ್ರ. ಬಿಜೆಪಿಯಲ್ಲಿ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮಂಗಳವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಣಿ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ ಜನಾರ್ದನ ರೆಡ್ಡಿ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಹೀಗಿರುವಾಗ ಅಶೋಕ್ ಖೇಣಿ ಸೇರ್ಪಡೆ ಬಗ್ಗೆ ಟೀಕೆಗಳು ರಾಜಕೀಯ ಪ್ರೇರಿತ ಎಂದು ಪ್ರತಿಕ್ರಿಯಿಸಿದರು.
‘ನರಹಂತಕರು, ಭಯೋತ್ಪಾದಕರು ಎಲ್ಲರೂ ಬಿಜೆಪಿಯಲ್ಲೇ ಇದ್ದಾರೆ. ಹೀಗಾಗಿ ಬಿಜೆಪಿಯವರೇ ನರಹಂತಕರು, ನಾನಲ್ಲ’
-ಸಿದ್ದರಾಮಯ್ಯ ಮುಖ್ಯಮಂತ್ರಿ