ದ.ಕ.ಜಿಲ್ಲಾ ಗಿಲ್‌ನೆಟ್ ಮೀನುಗಾರರ ಸಂಘದ ಸಭೆ
ಮಂಗಳೂರು, ಮಾ.6: ದ.ಕ.ಜಿಲ್ಲಾ ಗಿಲ್‌ನೆಟ್ ಮೀನುಗಾರರ ಸಂಘದ ಸಭೆಯು ಹಳೆ ಬಂದರ್‌ನಲ್ಲಿರುವ ಟ್ರಾಲ್‌ಬೋಟ್ ಕಚೇರಿಯಲ್ಲಿ ನಡೆದು ಮೀನುಗಾರಿಕೆಗೆ ಸಂಬಂಧಿಸಿ ಮೀನುಗಾರರು ಎದುರಿಸುವ ಸಮಸ್ಯೆಯ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಅಲಿ ಹಸನ್ ಮೀನುಗಾರಿಕಾ ಬೋಟ್‌ಗಳಿಗೆ ಮೇ ಅಂತ್ಯದವರೆಗೆ ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ಪೂರೈಕೆ ಮಾಡಲು ರಾಜ್ಯ ಸರಕಾರ ಮುಂದಾಗಬೇಕು. ಇಲ್ಲದಿದ್ದರೆ ಮೀನುಗಾರರ ಬದುಕು ಅತಂತ್ರಗೊಳ್ಳಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು.
ಉಪಾಧ್ಯಕ್ಷ ಸುಭಾಷ್ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಗೌರವಾಧ್ಯಕ್ಷ ಸತೀಶ್ ಕೋಟ್ಯಾನ್, ಕೋಶಾಧಿಕಾರಿ ಸುನೀಲ್, ಜೊತೆ ಕಾರ್ಯದರ್ಶಿ ರಿಯಾಝ್, ಹೈದರ್ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಶೀರ್ ಬೆಂಗರೆ ಸ್ವಾಗತಿಸಿ, ವಂದಿಸಿದರು.