ರಸ್ತೆ ಅಪಘಾತ: ಯುವಕ ಮೃತ್ಯು
Update: 2018-03-06 22:09 IST
ಬೆಂಗಳೂರು, ಮಾ.6: ಶರವೇಗದಲ್ಲಿ ಸಾಗುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಪೀಣ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿರಾ ಮೂಲದ ಚೇತನ್(24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಬೈಕ್‌ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾರ್ಮೆಂಟ್‌ವೊಂದರ ನೌಕರನಾಗಿದ್ದ ಚೇತನ್ 8ನೇ ಮೈಲಿನಲ್ಲಿ ವಾಸವಾಗಿದ್ದನು. ಕೆಲಸ ಮುಗಿಸಿಕೊಂಡು ಸ್ನೇಹಿತನೊಂದಿಗೆ ಸೋಮವಾರ ರಾತ್ರಿ 10:30ರಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎರಡನೆ ಹಂತ, ಐಸಿಐಸಿ ಬ್ಯಾಂಕ್ ರಸ್ತೆಯ ಎನ್‌ಟಿಟಿಎಫ್ ಬಳಿ ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಚೇತನ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಪೀಣ್ಯ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.