ಚೊಚ್ಚಲ ಪಂದ್ಯ ಆಡಿದ ವಿಜಯ್ ಶಂಕರ್

Update: 2018-03-06 18:28 GMT

ಕೊಲಂಬೊ, ಮಾ.6: ಆಲ್‌ರೌಂಡರ್ ವಿಜಯ್ ಶಂಕರ್ ಶ್ರೀಲಂಕಾ ವಿರುದ್ಧ ಮಂಗಳವಾರ ಇಲ್ಲಿ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ಚೆನ್ನೈ ಆಟಗಾರ ಶಂಕರ್ ಕಳೆದ ವರ್ಷ ಶ್ರೀಲಂಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದರೂ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ತ್ರಿಕೋನ ಟ್ವೆಂಟಿ-20 ಸರಣಿಯಲ್ಲಿ ಭಾರತ ತಂಡ ಪ್ರಮುಖ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್ ಹಾಗೂ ಜಸ್‌ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News