ಪ್ರತಿಮೆ ಧ್ವಂಸ ಪ್ರಕರಣ: ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ

Update: 2018-03-07 06:59 GMT

ಹೊಸದಿಲ್ಲಿ, ಮಾ.7: ತ್ರಿಪುರಾ ಹಾಗೂ ತಮಿಳುನಾಡು ಸಹಿತ ದೇಶದೆಲ್ಲೆಡೆ ಕಳೆದ ಕೆಲವು ದಿನಗಳಿಂದ ಪ್ರತಿಮೆಗಳನ್ನು ಧ್ವಂಸಗೊಳಿಸುತ್ತಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಪ್ರಧಾನಿ ಅವರು ಗೃಹ ಸಚಿವರಾದ ರಾಜ್‌ನಾಥ್ ಸಿಂಗ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಗೃಹ ವ್ಯವಹಾರ ಸಚಿವಾಲಯವು ಎಲ್ಲ ರಾಜ್ಯಗಳಿಗೆ ಸಲಹೆಗಾರರನ್ನು ಕಳುಹಿಸಿಕೊಟ್ಟಿದ್ದು, ಪ್ರತಿಮೆಯನ್ನು ಧ್ವಂಸಗೊಳಿಸುವುದನ್ನು ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಲು ನಿರ್ದೇಶನ ನೀಡಿದೆ. ಇಂತಹ ಕೃತ್ಯ ಎಸೆಗುವವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ದೇಶದಾದ್ಯಂತ ಪ್ರತಿಮೆ ಧ್ವಂಸಗೊಳಿಸುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಮಂತ್ರಿ, ಗೃಹಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದಾರೆ. ಇಂತಹ ಘಟನೆ ತಡೆಯಲು ರಾಜ್ಯ ಸರಕಾರ ಎಲ್ಲ ಸೂಕ್ತ ಕ್ರಮಗೊಳ್ಳುವಂತೆ ಗೃಹ ಸಚಿವಾಲಯ ತಿಳಿಸಿದೆ ಎಂದು ಗೃಹ ವ್ಯವಹಾರ ಸಚಿವಾಲಯ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News