ನ್ಯಾ.ವಿಶ್ವನಾಥ ಶೆಟ್ಟಿ ಆರೋಗ್ಯ ಸ್ಥಿರವಾಗಿದೆ: ಡಾ.ದಿವಾಕರ್

Update: 2018-03-07 15:51 GMT

ಬೆಂಗಳೂರು, ಫೆ.7: ಚಾಕು ಇರಿತದಿಂದ ಗಂಭೀರ ಗಾಯಗೊಂಡು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಆರೋಗ್ಯ ಸ್ಥಿರವಾಗಿದ್ದು, ಮೂರು ದಿನಗಳ ಕಾಲ ತುರ್ತು ನಿಗಾ ಘಟಕದಲ್ಲಿ ಇಡಲಾಗುವುದು ಎಂದು ಡಾ.ದಿವಾಕರ್ ಭಟ್ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ನ್ಯಾ.ವಿಶ್ವನಾಥ ಶೆಟ್ಟಿಗೆ ಹೊಟ್ಟೆ, ಎದೆ ಹಾಗೂ ಕೈಗೆ ಶಸ್ತ್ರಚಿಕಿತ್ಸೆ ನಡೆಸಿ ರಕ್ತಸ್ರಾವವನ್ನು ನಿಲ್ಲಿಸಿದ್ದೇವೆ. ಹೀಗಾಗಿ ಅವರ ದೇಹ ಸ್ಥಿರವಾಗಿದ್ದು, ಮಾತನಾಡುವಷ್ಟು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಸುಮಾರು 74ವರ್ಷದ ನ್ಯಾ.ವಿಶ್ವನಾಥ ಶೆಟ್ಟಿಗೆ ಮಧುಮೇಹವಿದೆ ಹಾಗೂ ಒಂದು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಹಲ್ಲೆಯಿಂದ ಗಂಭೀರ ಹಲ್ಲೆಗೊಳಗಾಗಿರುವ ಅವರ ಆರೋಗ್ಯವನ್ನು ಸ್ಥಿರವಾಗಿಡುವ ನಿಟ್ಟಿನಲ್ಲಿ ಆಸ್ಪತ್ರೆಯ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News