ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ನೋಂದಣಿಗೆ ಆಧಾರ್ ಕಡ್ಡಾಯದ ಬಗ್ಗೆ ಸುಪ್ರೀಂ ಹೇಳಿದ್ದೇನು?

Update: 2018-03-07 14:52 GMT

ಹೊಸದಿಲ್ಲಿ, ಮಾ.7: ನೀಟ್ 2018 ಮತ್ತು ಇತರ ಅಖಿಲ ಭಾರತ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸದಿರುವಂತೆ ಸರ್ವೋಚ್ಚ ನ್ಯಾಯಾಲಯ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಗೆ ಸೂಚಿಸಿದೆ. ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಈ ಮಾಹಿತಿಯನ್ನು ಜಾಲತಾಣದಲ್ಲಿ ಹಾಕುವಂತೆ ಸಿಬಿಎಸ್‌ಇಗೆ ಸೂಚಿಸಿದೆ. 2018ರ ನೀಟ್ ಪರೀಕ್ಷೆಗೆ ಹೆಸರು ನೋಂದಾಯಿಸುವ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಪಡೆಯಲು ಸಿಬಿಎಸ್‌ಇಗೆ ತಾನು ಅನುಮತಿ ನೀಡಿಲ್ಲ ಎಂದು ಆಧಾರ್ ಪ್ರಾಧಿಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಮತ್ತು ಅಸ್ಸಾಂನಲ್ಲಿರುವಂತೆ ವಿದ್ಯಾರ್ಥಿಗಳ ಹೆಸರನ್ನು ಪರೀಕ್ಷೆಗೆ ನೋಂದಾಯಿಸಲು ಸಿಬಿಎಸ್‌ಇ, ಪಾಸ್‌ಪೋರ್ಟ್, ಮತದಾರರ ಗುರುತಿನ ಚೀಟಿ ಮತ್ತು ರೇಶನ್ ಕಾರ್ಡನ್ನು ಕೂಡಾ ಗುರುತಿನ ಸಾಕ್ಷಿಯಾಗಿ ಬಳಸಬಹುದು ಎಂದು ಆಧಾರ್ ಪ್ರಾಧಿಕಾರ ತನಗೆ ಸೂಚಿಸಿತ್ತು ಎಂದು ಅಟರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ನ್ಯಾಯಾಲಯದಲ್ಲಿ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News