ಬೆಂಗಳೂರು: ರಸ್ತೆ ಅಪಘಾತ; ಯುವಕ ಮೃತ್ಯು
Update: 2018-03-08 18:22 IST
ಬೆಂಗಳೂರು, ಮಾ.8: ಶರವೇಗವಾಗಿ ಸಾಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ದೇವಸಂದ್ರ ನಿವಾಸಿ ವಿನೋದ್‌ಕುಮಾರ್(20) ಮೃತಪಟ್ಟ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಗುರುವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿನೋದ್‌ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ದೇವಸಂದ್ರ ಜಂಕ್ಷನ್ ಬಳಿಯ ಒಎಂ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ವಿನೋದ್‌ಕುಮಾರ್ ಗಂಭೀರ ಗಾಯಗೊಂಡರು ಎನ್ನಲಾಗಿದೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆಆರ್ ಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.