×
Ad

ಶಿವಮೊಗ್ಗ: ಗಾಂಜಾ ಮಾರಾಟ; ಇಬ್ಬರ ಬಂಧನ

Update: 2018-03-08 18:27 IST

ಶಿವಮೊಗ್ಗ, ಮಾ. 8: ಜಿಲ್ಲೆಯ ಭದ್ರಾವತಿ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜು ಎದುರು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿರುವ ಘಟನೆ ವರದಿಯಾಗಿದೆ. 

ಭದ್ರಾವತಿ ಪಟ್ಟಣದ ಕೂಲಿಬ್ಲಾಕ್ ಶೆಡ್ ನಿವಾಸಿ ರೋಷನ್ (19) ಹಾಗೂ ಇಂದಿರಾನಗರದ ನಿವಾಸಿ ಹರ್ಷದ್ (19) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಈ ವೇಳೆ ಕೂಲಿಬ್ಲಾಕ್ ಶೆಡ್ ಏರಿಯಾದ ನಿವಾಸಿ ಮಧು ಎಂಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮಕೈಗೊಂಡಿದ್ದಾರೆ. 

ಬಂಧಿತ ಆರೋಪಿಗಳಿಬ್ಬರಿಂದ 2000 ರೂ. ಮೌಲ್ಯದ 100 ಗ್ರಾಂ ಗಾಂಜಾ ಸೊಪ್ಪು, ಮೂರು ಮೊಬೈಲ್ ಫೋನ್, ಸ್ಕೂಟಿ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ವೇಳೆ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಂದಿದ್ದಾಗಿ ತಿಳಿಸಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News