ವಿಧಾನಪರಿಷತ್ ಸದಸ್ಯ ರಘು ಆಚಾರ್ ನಿವಾಸದ ಮೇಲೆ ಐಟಿ ದಾಳಿ?
Update: 2018-03-08 20:16 IST
ಬೆಂಗಳೂರು. ಮಾ.8: ಸ್ಥಳೀಯ ಸಂಸ್ಥೆಗಳ ಮೂಲಕ ಚಿತ್ರದುರ್ಗ ಜಿಲ್ಲೆಯಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿರುವ ರಘು ಆಚಾರ್ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಿವಾಸ ಮತ್ತು ಸೆಂಟ್ರಲ್ ಮಾಲ್ ಬಳಿ ಇರುವ ಕಚೇರಿಯ ಮೇಲೆ 10ಕ್ಕೂ ಅಧಿಕ ಮಂದಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಪಕ್ಷೇತರ ಸದಸ್ಯರಾಗಿ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ರಘು ಆಚಾರ್ ಆನಂತರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.