ಬೆಂಗಳೂರು: ಬಿಎಂಟಿಸಿ ಮಹಿಳಾ ಸಿಬ್ಬಂದಿಗೆ ಸನ್ಮಾನ
Update: 2018-03-08 21:01 IST
ಬೆಂಗಳೂರು, ಮಾ.8: ವಿಶ್ವ ಮಹಿಳಾ ದಿನದ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸಂಸ್ಥೆಯಲ್ಲಿ ಉತ್ತಮ ಸಾಧನೆಗೈದ 57 ಮಹಿಳಾ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಗುರುವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜ ಯಾದವ್ ಮಹಿಳಾ ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ವಿತರಿಸಿದರು. ಈ ವೇಳೆ ಅನಾರೋಗ್ಯದಿಂದ ಕಾಲು ಕಳೆದುಕೊಂಡ ಬಿಎಂಟಿಸಿ ಮಹಿಳಾ ಸಿಬ್ಬಂದಿಯ ಕೃತಕ ಕಾಲು ಜೋಡಣೆಗೆ ಆರ್ಥಿಕ ಸಹಾಯ ನೀಡಿದರು.
ಕಾರ್ಯಕ್ರಮದಲ್ಲಿ ಬಿಎಂಟಿಸಿ ಉಪಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ಡಾ.ಏಕ್‌ರೂಪ್ ಕೌರ್, ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನೂರಾಜ್, ಎ.ಎನ್.ಪ್ರಕಾಶ್‌ಗೌಡ, ಎಂ.ಎಂ. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ರಾಜಶ್ರೀ ನಾಗರಾಜು ಸೇರಿದಂತೆ ಪ್ರಮುಖರಿದ್ದರು.