ಸಯೀದ್ ಪಕ್ಷ ನೋಂದಣಿಗೆ ಇಸ್ಲಾಮಾಬಾದ್ ಹೈಕೋರ್ಟ್ ಸೂಚನೆ

Update: 2018-03-08 16:58 GMT

ಇಸ್ಲಾಮಾಬಾದ್, ಮಾ. 8: ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರ ಹಫೀಝ್ ಸಯೀದ್‌ನ ರಾಜಕೀಯ ಪಕ್ಷ ಮಿಲಿ ಮುಸ್ಲಿಮ್ ಲೀಗ್ (ಎಂಎಂಎಲ್)ನ್ನು ನೋಂದಾಯಿಸುವಂತೆ ಇಸ್ಲಾಮಾಬಾದ್ ಹೈಕೋರ್ಟ್ ಗುರುವಾರ ಪಾಕಿಸ್ತಾನದ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

ಕಳೆದ ವರ್ಷ ಆಂತರಿಕ ಸಚಿವಾಲಯದ ಆಕ್ಷೇಪಣೆಯ ಹಿನ್ನೆಲೆಯಲ್ಲಿ ಈ ಪಕ್ಷವನ್ನು ನೋಂದಾಯಿಸಲು ಚುನಾವಣಾ ಆಯೋಗವು ನಿರಾಕರಿಸಿತ್ತು.

ಜನರನ್ನು ವಿಭಜಿಸಿ ಅವರ ಕೋಪವನ್ನು ಚುನಾವಣೆಯಲ್ಲಿ ಗೆಲ್ಲಲು ಉಪಯೋಗಿಸುವ ನಿರ್ದಿಷ್ಟ ಮಾದರಿಯ ರಾಜಕಾರಣವನ್ನು ಭಾರತದಲ್ಲಿ ಮಾಡಲಾಗುತ್ತಿದೆ. ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವ್ಯವಸ್ಥೆಗೂ ಅಪಾಯವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News