ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ
ಬಂಟ್ವಾಳ, ಮಾ. 8: ಕಳ್ಳಿಗೆ ಗ್ರಾಮ ಆರ್ಥಿಕವಾಗಿ ಹಿಂದುಳಿದಿದ್ದು, ಈ ಗ್ರಾಮದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಭರವಸೆ ನಿಡಿದ್ದಾರೆ.
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಚ್ಛತಾ ಕರೆಗಂಟೆ ಅಳವಡಿಸಿ, ಮೊಳಗಿಸುವ ಮೂಲಕ ಕಾಲಿಂಗ್ಬೆಲ್ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿ, ತಾಲೂಕಿನ 9 ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕಳ್ಳಿಗೆ ಗ್ರಾಮ ಕೂಡಾ ಒಂದು. ಈ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಶಿವಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಸದಸ್ಯ ದಿವಾಕರ ಪಂಬದಬೆಟ್ಟು, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಕಳ್ಳಿಗೆ ಗ್ರಾಪಂ ಉಪಾಧ್ಯಕ್ಷ ಪುರುಷ ಎನ್. ಸಾಲಿಯಾನ್, ಸದಸ್ಯ ಮುಧುಸೂದನ್ ಶೇಣೈ, ಇಂಜಿನಿಯರ್ ಕೃಷ್ಣಾ, ಉಮಾನಾಥ್ ಕೋಟೆಕಾರ್, ರಾಘವ, ಮತ್ತಿತರರು ಇದ್ದರು.
ಇದೇ ವೇಳೆ ತಾಪಂ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ ಸಹಾಯಧನ, 94ಸಿಸಿ ಹಕ್ಕು ಪತ್ರ ವಿತರಣೆ, ಇಂದಿರಾ ಆವಾಜ್ ಯೋಜನೆ ಹಾಗೂ ಬಸವ ವಸತಿ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಾಗೂ ಕಾಲಿಂಗ್‌ಬೆಲ್‌ಗಳನ್ನು ವಿತರಿಸಲಾಯಿತು. ಕಳ್ಳಿಗೆ ಗ್ರಾಪಂ ಅಧ್ಯಕ್ಷೆ ರತ್ನಾ ಸ್ವಾಗತಿಸಿ, ಸದಸ್ಯೆ ಯಶೋಧಾ ಪ್ರಸ್ತಾವಿಸಿದರು. ಪಂ ಸಿಬ್ಬಂದಿ ಮೆಲಿಟಾ ಎಂ.ಆರ್.ಡಿ. ನಿರೂಪಿಸಿದರು. ಪತ್ರಕರ್ತ ಗೋಪಾಲ್ ಅಂಚನ್ ನಿರೂಪಿಸಿದರು.