ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಮಹಿಳಾ ದಿನಾಚರಣೆ
Update: 2018-03-08 23:24 IST
ಮಂಗಳೂರು, ಮಾ. 8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಮಾಜಿ ಮೇಯರ್ ಕವಿತಾ ಸನಿಲ್, ಡಿಸಿಪಿ ಉಮಾ ಪ್ರಶಾಂತ್ ಹಾಗೂ ಡಾ. ಸಯೀದಾ ಮೊಗ್ರಾಲ್ ಅವರನ್ನು ಭೇಟಿಯಾಗಿ ಮಹಿಳಾ ದಿನಾಚರಣೆಯ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.
ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್‌ನ ಜಿಲ್ಲಾ ಉಪಾಧ್ಯಕ್ಷೆ ಮುರ್ಶಿದಾ, ಕಾರ್ಯದರ್ಶಿ ಮುಫೀದಾ ಸುಹೈನಾ ಹಾಗೂ ಸುಹಾನ ಮತ್ತಿತರು ಉಪಸ್ಥಿತರಿದ್ದರು.