×
Ad

ಪ್ರತ್ಯೇಕ ನಾಡಧ್ವಜ

Update: 2018-03-08 23:51 IST

ಪ್ರಸ್ತಾವಿತ ಕನ್ನಡ ಧ್ವಜದ ಕುರಿತು ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿಗಳ ಗೃಹಕಚೇರಿ ‘ಕೃಷ್ಣಾ’ದಲ್ಲಿ ನಡೆದ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಧ್ವಜದ ವಿನ್ಯಾಸವನ್ನು ಪ್ರದರ್ಶಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸರಕಾರ ರಚನೆ ಮಾಡಿದ್ದ ಸಮಿತಿ ಸಿದ್ಧಪಡಿಸಿರುವ ನಾಡಧ್ವಜದ ವಿನ್ಯಾಸದ ಬಗೆಗಿನ ಈ ಸಭೆಯಲ್ಲಿ ರಾಜ್ಯದ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿರಿಯ ಸಾಹಿತಿಗಳು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor