×
Ad

ಕುಂದಾಪುರ: ತ್ರಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

Update: 2018-03-10 19:16 IST

ಕುಂದಾಪುರ, ಮಾ.10: ತ್ರಿಪುರದಲ್ಲಿ ಬಿಜೆಪಿ ಹಾಗೂ ಸಂಘಪರಿವಾರವು ಸಿಪಿಎಂ ಪಕ್ಷದ ಕಾರ್ಯಕರ್ತರ, ಕಛೇರಿ, ಮನೆಗಳ ಮೇಲೆ ರಾಜಕೀಯ ವೈಷಮ್ಯದಿಂದ ನಡೆಸುತ್ತಿರುವ ದಾಳಿ ಮತ್ತು ಹಿಂಸಾಚಾರವನ್ನು ಖಂಡಿಸಿ ಸಿಪಿಎಂ ಕುಂದಾಪುರ ವಲಯ ಸಮಿತಿ ಮಾ.9ರಂದು ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಶಂಕರ್, ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ವಲಯ ಕಾರ್ಯದರ್ಶಿ ಎಚ್.ನರಸಿಂಹ ಮಾತನಾಡಿ, ಸಂಘಪರಿವಾರದ ಕಾರ್ಯಕರ್ತರು ದೇಶದ ವಿವಿಧೆಗಳಲ್ಲಿ ನಡೆಸಿರುವ ಲೆನಿನ್, ಪೆರಿಯಾರ್, ಅಂಬೇಡ್ಕರ್ ಪ್ರತಿಮೆ ಧ್ವಂಸ ಕೃತ್ಯವನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಸಿಪಿಎಂ ಮುಖಂಡರಾದ ಮಹಾಬಲ ವಡೇರ ಹೋಬಳಿ, ವೆಂಕಟೇಶ್ ಕೋಣಿ, ಸುರೇಶ್ ಕಲ್ಲಾಗರ, ಬಲ್ಕೀಸ್ ಮೊದಲಾದ ವರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ನಡೆಸ ಲಾಯಿತು. ಇದರಲ್ಲಿ ನೂರಾರು ಕಾರ್ಮಿಕರ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News