×
Ad

ಲೋಕಾಯುಕ್ತರ ಕೊಲೆಯತ್ನ ಖಂಡಿಸಿ ಬಿಜೆಪಿ ಪ್ರತಿಭಟನೆ

Update: 2018-03-10 19:31 IST

ಮಂಗಳೂರು, ಮಾ.10: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಕೊಲೆಯತ್ನ ಕೃತ್ಯವನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಸಮಿತಿಯು ಶನಿವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಲೋಕಾಯುಕ್ತ ನ್ಯಾಯಮೂರ್ತಿಗೇ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಆಡಳಿತದ ಎಲ್ಲಾ ಹಂತದಲ್ಲೂ ವಿಫಲವಾಗಿರುವ ಈ ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವೇದವ್ಯಾಸ ಕಾಮತ್, ಸುಲೋಚನಾ ಭಟ್, ಕಸ್ತೂರಿ ಪಂಜ, ಸುದರ್ಶನ ಮೂಡುಬಿದಿರೆ ಮತ್ತಿತರರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News