×
Ad

ಉತ್ತರಪ್ರದೇಶ: ಅಂಬೇಡ್ಕರ್ ಪ್ರತಿಮೆಗೆ ಹಾನಿ

Update: 2018-03-10 21:30 IST

ಲಕ್ನೋ, ಮಾ.10: ಇಲ್ಲಿಂದ 300 ಕಿ.ಮೀ. ದೂರದಲ್ಲಿರುವ ಅಝಮ್‌ಗಢ ಜಿಲ್ಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಲಾಗಿದೆ. ಇದರಿಂದ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದೆ. ಜಿಲ್ಲೆಯ ರಾಜಾ ಪಟ್ಟಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಯ ತಲೆಯನ್ನು ಕೆಲವು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿಂದ 500 ಕಿ.ಮೀ. ದೂರದಲ್ಲಿರುವ ಮೀರತ್ ಜಿಲ್ಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಬಲ್ಲಿಯಾ ಜಿಲ್ಲೆಯಲ್ಲಿ ಹನುಮಾನ್ ಪ್ರತಿಮೆಗೆ ಹಾನಿ ಎಸಗಲಾಗಿತ್ತು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News