×
Ad

ಬಿಸಿಸಿಐ ಕಾನೂನು ಅಭಿಪ್ರಾಯ ನಿರೀಕ್ಷೆಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್

Update: 2018-03-10 23:33 IST

ಹೊಸದಿಲ್ಲಿ, ಮಾ.10: ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿ ವಿವಾದದಲ್ಲಿ ಸಿಲುಕಿರುವ ಕಾರಣ ಐಪಿಎಲ್ ಫ್ರಾಂಚೈಸಿ ಡೆಲ್ಲಿ ಡೇರ್ ಡೆವಿಲ್ಸ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.

ಶಮಿ ವಿರುದ್ಧ ಅವರ ಪತ್ನಿ ಹಸೀನಾ ಜಹಾನ್ ಪೊಲೀಸ್ ಠಾಣೆಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿರುವ ಕಾರಣ ಬಿಸಿಸಿಐ ಈಗಾಗಲೇ ಶಮಿಯ ಕೇಂದ್ರೀಯ ಗುತ್ತಿಗೆಯನ್ನು ತಡೆ ಹಿಡಿದಿದೆ. ಈ ವರ್ಷದ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಬಂಗಾಳದ ವೇಗಿ ಶಮಿಗೆ ಅವಕಾಶ ನೀಡಬೇಕೇ, ಬೇಡವೇ ಎಂಬ ಬಗ್ಗೆ ಬಿಸಿಸಿಐಯಿಂದ ಕಾನೂನು ಅಭಿಪ್ರಾಯ ಪಡೆಯಲು ಡೆಲ್ಲಿ ಫ್ರಾಂಚೈಸಿ ನಿರ್ಧರಿಸಿದೆ.

‘‘ಈ ವಿಷಯದಲ್ಲಿ ಡೆಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಿಲ್ಲ. ಇದೊಂದು ಸೂಕ್ಷ್ಮ ವಿಷಯವೆಂದು ನಮಗೆ ಗೊತ್ತಿದೆ. ಈ ಬಗ್ಗೆ ನಾವು ಬಿಸಿಸಿಐನ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸುತ್ತೇವೆ’’ಎಂದು ಡೆಲ್ಲಿ ಫ್ರಾಂಚೈಸಿಯ ಹಿರಿಯ ಅಧಿಕಾರಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News