ಉಡುಪಿ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಸಮಾವೇಶ
ಉಡುಪಿ, ಮಾ.11: ಹಿಂದುಳಿದ ವರ್ಗಗಳಿಗೆ ಶಕ್ತಿ ನೀಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಹಿಂದುಳಿದವರ್ಗದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ ಏಕೈಕ ಪಕ್ಷ ಕಾಂಗ್ರೆಸ್. ಇದರಿಂದ ಹಿಂದುಳಿದ ವರ್ಗದವರಿಗೆ ಗರಿಷ್ಠ ಶಕ್ತಿ ತುಂಬಲು ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಶ್ರೀನಾರಾಯಣ ಗುರು ಸಭಾಭವನದಲ್ಲಿ ರವಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಬೆಂಗಳೂರು ನಗರ ಜಿಲ್ಲಾಧ್ಯಕ್ಷ ರಾಜಣ್ಣ, ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ವೆಂಕಟ ಸುಬ್ಬ ರಾಜು, ಪ್ರಧಾನ ಕಾರ್ಯದರ್ಶಿ ರೂಪ್ ಸಿಂಗ್, ಕಾರ್ಯದರ್ಶಿ ರಾಜೇಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾ ರ್ದನ ತೋನ್ಸೆ, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಜಿ.ಎ.ಬಾವ, ಮಾಜಿ ಶಾಸಕ ಗೋಪಾಲ ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕರಾಜ್ ಮುಖ್ಯ ಅತಿಥಿಗಳಾಗಿದ್ದರು.
ಜಿಲ್ಲಾ ಹಿಂದುಳಿದ ಘಟಕದ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ, ಮುಖಂಡರಾದ ಜಯಶ್ರೀಕೃಷ್ಣ ರಾಜ್, ಗಣೇಶ್ ಕೋಟ್ಯಾನ್, ರೋಶನಿ ಒಲಿವರ್, ಮನೋಜ್ ಕರ್ಕೇರ, ಶಶಿಧರ್ ಶೆಟ್ಟಿ ಎಲ್ಲೂರು, ಇಸ್ಮಾಯಿಲ್ ಆತ್ರಾಡಿ, ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರ ಮೊದ ಲಾದವರು ಉಪಸ್ಥಿತರಿದ್ದರು. ಈ ಪ್ರಯುಕ್ತ ಮಹಿಳಾ ಸಂಘಟನೆಗಳಿಗೆ ಜಿಲ್ಲಾ ಮಟ್ಟದ ಸಮೂಹ ನೃತ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.