ಈ ಬಾರಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ: ಹರ್ಷ ಮೊಯ್ಲಿ
Update: 2018-03-11 21:51 IST
ಉಡುಪಿ, ಮಾ.11: ಈ ಬಾರಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸುವ ವಿಶ್ವಾಸ ಇದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಥಾನದ ಆಕಾಂಕ್ಷಿಯಾಗಿರುವ ಹರ್ಷ ಮೊಯ್ಲಿ ಹೇಳಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಕಳ ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದು, ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕೆಲಸವನ್ನು ಹೈಕಮಾಂಡ್ ಮಾಡುತ್ತದೆ. ಈ ಕ್ಷೇತ್ರದಲ್ಲಿ ಜಯ ಗಳಿ ಸುವಂತಹ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡಬೇಕೆಂಬುದು ನನ್ನ ಅಭಿಪ್ರಾಯ ಎಂದರು.
ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಮಾಡಲು ನಾನು ಸಿದ್ಧನಾಗಿದ್ದೇನೆ. ಈ ಬಾರಿ ಕಾರ್ಕಳ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸುವ ಉದ್ದೇಶ ದಿಂದ ನಾವೆಲ್ಲ ಒಂದಾಗಿ ಕೆಲಸ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.