×
Ad

ಭಟ್ಕಳ: ಶಿಕ್ಷಕರ ಸಂಘಟನೆಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಪಟಗಾರ ರ ಬೀಳ್ಕೊಡುಗೆ

Update: 2018-03-11 22:45 IST

ಭಟ್ಕಳ, ಮಾ. 11: ಕಳೆದ ಮೂರು ವರ್ಷಗಳಿಂದ ಭಟ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಯಲ್ಲಿದ್ದು ಶಿರಶಿಗೆ ವರ್ಗಾವಣೆಗೊಂಡಿರುವ ವೆಂಕಟೇಶ್ ಪಟಗಾರರನ್ನು ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಮುಖ್ಯಾಧ್ಯಾಪಕರ ಸಂಘ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ದೈಹಿಕ ಶಿಕ್ಷಕರ ಸಂಘಗಳ ಜಂಟಿ ಆಶ್ರಯದಲ್ಲಿ ನ್ಯೂ ಇಂಗ್ಲಿಷ್ ಶಾಲಾ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘಟನೆಗಳು ನೀಡಿದ ಸನ್ಮಾನ ಗೌರವನ್ನು ಸ್ವೀಕರಿಸಿ ಮಾತನಾಡಿದ ವೆಂಕಟೇಶ್ ಪಟಗಾರ, ಶಿಕ್ಷಕರು ಆತ್ಮಗೌರವವನ್ನು ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಎಲ್ಲವನ್ನೂ ತ್ಯಾಗ ಮಾಡುವ ಮನೋಭಾವ ಹೊಂದಿರುವವರು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದ ಅವರು ಸಮಾಜದಲ್ಲಿ ಗೌರವಯುತ ವ್ಯಕ್ತಿಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ತಪ್ಪುಗಳು ಎಲ್ಲರಿಂದಲೂ ಉಂಟಾಗುತ್ತವೆ. ತನ್ನ ತಪ್ಪುಗಳನ್ನು ಅರಿತು ಅದನ್ನು ಸರಿಪಡಿಸಿಕೊಂಡಾತನೇ ಸಮಾಜದಲ್ಲಿ ಗೌರವ ಸ್ಮಾನಗಳಿಗೆ ಪಾತ್ರನಾಗಬಲ್ಲ ಎಂದರು.

ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ವರ್ಗಾವಣೆಗೊಂಡು ಬಟ್ಕಳಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡುವ ಎಂ.ಆರ್.ಮಾಂಜಿಯವರನ್ನು ಸ್ವಾಗತಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರ್ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಸಂಯೋಜಕಿ ಯಲ್ಲಮ್ಮ ಮರಿಸ್ವಾಮಿ, ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂದೇಶ ಹುರುಳಿಕಾಶಿ, ಸಂಘಟನಾ ಕಾರ್ಯದರ್ಶಿ ಎಂ.ಆರ್.ಮಾನ್ವಿ, ಚಿದಾನಂದ ಪಟಗಾರ, ಗಣಪಿ ಭಟ್, ಪ್ರಾ.ಶಾ.ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಎಂ.ಡಿ. ರಫೀಖ್, ಉಮೇಶ್ ಕೆರೆಕಟ್ಟೆ, ಮತ್ತಿತರರು ವೆಂಕಟೇಶ್ ಪಟಗಾರ ಕುರಿತಂತೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲ್ ನಾಯ್ಕ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಗೀತಾ ಶಿರೂರ್ ಧನ್ಯವಾದ ಅರ್ಪಿಸಿದರು. ಮಂಜುಳು ಶಿರೂರ್ಕರ್ ಹಾಗೂ ಪ್ರತಿಭಾ ಕರ್ಕಿಕರ್ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ನ್ಯೂ ಇಂಗ್ಲಿಷ್ ಶಾಲೆಯ ಮುಖ್ಯಾಧ್ಯಾಪಕ ಎಂ.ಕೆ.ನಾಯ್ಕ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಶ್ರೀಧರ್ ಮೊಗೇರ್, ಕೆ.ಬಿ.ಮಡಿವಾಳ, ರವಿಕಿರಣ ಚೌಕಿಮನೆ, ಪಿ.ಟಿ.ಚೌಹಾಣ್, ಶಬ್ಬಿರ್ ದಫೆದಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News