ಅನಂತ್‌ನಾಗ್: ಮೂವರು ಉಗ್ರರ ಹತ್ಯೆ

Update: 2018-03-12 06:25 GMT

ಶ್ರೀನಗರ, ಮಾ.12: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ.

ಜಿಲ್ಲೆಯ ಹಕುರಾ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ರವಿವಾರ ತಡರಾತ್ರಿ ಉಗ್ರ ವಿರೋಧಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಭದ್ರತಾ ಪಡೆಗಳು ನಡೆಸಿರುವ ಎನ್‌ಕೌಂಟರ್‌ನಲ್ಲಿ ಉಗ್ರರು ಬಲಿಯಾಗಿದ್ದಾರೆ. ಉಗ್ರರು ಯಾವ ಸಂಘಟನೆಗೆ ಸೇರಿದವರೆಂದು ಇನ್ನೂ ದೃಢಪಟ್ಟಿಲ್ಲ.

"ಹತಗೊಂಡ ಉಗ್ರರಿಂದ ಎಕೆ 47 ರೈಫಲ್ಸ್, ಪಿಸ್ತೂಲ್‌ಗಳು, ಹ್ಯಾಂಡ್ ಗ್ರೆನೇಡ್ಸ್, ಸಹಿತ ಹಲವು ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ಓರ್ವ ಉಗ್ರ ಇತ್ತೀಚೆಗೆ ಪೊಲೀಸ್ ಗಾರ್ಡ್ ಪೋಸ್ಟ್‌ನಲ್ಲಿ ನಡೆದ ದಾಳಿಯಲ್ಲಿ ಒಳಗೊಂಡಿದ್ದಾನೆ. ಈ ಘಟನೆಯಲ್ಲಿ ಓರ್ವ ಪೊಲೀಸ್ ಕಾನ್ಸ್‌ಸ್ಟೇಬಲ್ ಮೃತಪಟ್ಟಿದ್ದರು’’ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.

ಎನ್‌ಕೌಂಟರ್ ಬಳಿಕ ಕಾನೂನು ಸುವವ್ಯಸ್ಥೆ ಕಾಪಾಡಲು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಶ್ಮೀರ ವಿವಿಯಲ್ಲಿ ಒಂದು ದಿನಗಳ ತರಗತಿಯನ್ನು ಸ್ಥಗಿತಗೊಳಿಸಲಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News