×
Ad

ಕಾರು ಅಪಘಾತದಲ್ಲಿ ಪೇದೆ ಮೃತ್ಯು

Update: 2018-03-12 18:41 IST

ಬೆಂಗಳೂರು, ಮಾ.12: ಗೋವಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮಾಗಡಿ ಪೊಲೀಸ್ ಠಾಣೆ ಪೇದೆ ಕರಿಯಪ್ಪ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ಕೆಲ ಪೊಲೀಸರು ಗೋವಾ ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿ ಪಣಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮತ್ತೊಬ್ಬ ಪೇದೆ ನರಸಿಂಹಮೂರ್ತಿ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News